Uncategorized

ಪ್ಲಾಸ್ಟಿಕ್ ಮಹಾಮಾರಿಯ ಕುರಿತು ಜಾಗೃತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸದ ಸಹಯೋಗದಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು ಮತ್ತು ಕಸ ವಿಲೇವಾರಿಯ ಕುರಿತು ಈ ವರ್ಷ ಇದುವರೆಗೆ ಒಟ್ಟು 15 ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಈ ಕಾರ್ಯಕ್ರಮಗಳಲ್ಲಿ ಮುಂದಿನ ದಿನಗಳಲ್ಲಿ ಪ್ಪಾಸ್ಟಿಕ್ ಬಳಕೆ ಕಡಿಮೆ ಮಾಡುವಂತೆ ಸಲಹೆ ನೀಡಲಾಯಿತು. ಮಾಹಿತಿಯ ಪರಿಣಾಮವಾಗಿ ಸದಸ್ಯರು ಬಿಸಿ ಆಹಾರವನ್ನು ಪ್ಲಾಸ್ಟಿಕ್ ಬಾಕ್ಸ್‍ನಲ್ಲಿ ನೀಡುವುದನ್ನು ನಿಲ್ಲಿಸಿದ್ದಾರೆ. ಮನೆಯ ಸುತ್ತಮುತ್ತ, ಚರಂಡಿ, ತಿಪ್ಪೆಗುಂಡಿ, ರಸ್ತೆಗಳಲ್ಲಿ ಪ್ಲಾಸ್ಟಿಕ್ ಎಸೆಯುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಪ್ಲಾಸ್ಟಿಕ್‍ನ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಪಡೆದ ಸದಸ್ಯರು, ಪರ್ಯಾಯವಾಗಿ ಬಟ್ಟೆ ಕೈಚೀಲ ಬಳಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.