News

ವನಮಹೋತ್ಸವ ಮತ್ತು ಪರಿಸರ ದಿನಾಚರಣೆ

ದೊಡ್ಡಬಳ್ಳಾಪುರ ವಲಯದ ಶಿವಪುರ ಅಮಾನಿಕೆರೆಯಲ್ಲಿ ‘ವನಮಹೋತ್ಸವ ಮತ್ತು ಪರಿಸರ ದಿನಾಚರಣೆ 2017- 18’ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜೂನ್ 5 ರಂದು ಆಚರಿಸಲಾಯಿತು.

ಕೆರೆ ಸಮಿತಿ ಅಧ್ಯಕ್ಷ ಎಸ್. ವಿ ಮುನಿವೆಂಕಟಶ್ಯಾಮಪ್ಪ ಹಾಗೂ ಯೋಜನಾಧಿಕಾರಿ ಸತೀಶ್ ನಾಯ್ಕ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಯುವ ಸಮುದಾಯ ಪರಿಸರ ಉಳಿಸಿ ಬೆಳೆಸುವ ಜವಾಬ್ದಾರಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆರೆ ಸಮಿತಿಯ ಸದಸ್ಯರೂ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಆಚರಣೆಯ ಅಂಗವಾಗಿ ಹೊಂಗೆಯ 52 ಗಿಡಗಳನ್ನು ಉಚಿತವಾಗಿ ವಿತರಿಸಿ, ಸುಮಾರು 52 ಕ್ಕೂ ಹೆಚ್ಚು ಗಿಡಗಳನ್ನು ನಾಟಿ ಮಾಡಲಾಯಿತು. ಕಾರ್ಯಕ್ರಮದಿಂದ ಜನರಲ್ಲಿ ಪರಿಸರ ರಕ್ಷಣೆಯಲ್ಲಿ ತಮ್ಮ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿತು.

ಸೀಡ್ ಬಾಲ್‍ನ ಪ್ರಾಮುಖ್ಯತೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಳಂದೂರು ತಾಲೂಕಿನ ವತಿಯಿಂದ ವನಮಹೋತ್ಸವ, ಪರಿಸರ ದಿನಾಚರಣೆ ಮತ್ತು ಸೀಡ್‍ಬಾಲ್ ತಯಾರಿ 2017-18 ನ್ನು ಗುಂಬಳ್ಳಿಯಲ್ಲಿ ಜೂನ್ 8 ರಂದು ಆಚರಿಸಲಾಯಿತು.

ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ ಪೂಜಾರಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಭಾಗವಹಿಸಿದ ಸದಸ್ಯರಿಗೆ ಪರಿಸರ ಜಾಗೃತಿಯ ಬಗ್ಗೆ ಅರಿವು ಮೂಡಿಸಲಾಯಿತು, ಜೊತೆಗೆ ಸೀಡ್‍ಬಾಲ್‍ನ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಭಾಗವಾಗಿ ಸ್ಥಳೀಯವಾಗಿ ಸಿಗುವ ಹುಣಸೆ, ಹೊಂಗೆ ಮೊದಲಾದ ಸುಮಾರು 750 ಬೀಜದುಂಡೆಗಳನ್ನು ತಯಾರಿಸಿ ನಾಟಿಗೆ ಸಿದ್ಧ ಮಾಡಲಾಗಿದೆ. ಕಾರ್ಯಕ್ರಮದ ಮೂಲಕ ಸದಸ್ಯರಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲಾಗಿದೆ.

ಕಾಡು ಬೆಳೆಸುವ ಬಗ್ಗೆ ಪಾಠ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಗಮಂಗಲ ತಾಲೂಕು ಶಾಖೆಯ ವತಿಯಿಂದ ಬಿಂದಿಗನ ಎಲೆ ಹೊನ್ನಾವರದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ವನ ಮಹೋತ್ಸವ ಕಾರ್ಯಕ್ರಮವನ್ನು ಜೂನ್ 5 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಅರಣ್ಯ ರಕ್ಷಕ ಶಿವಲಿಂಗು, ಕಾಲೇಜು ಪ್ರಾಂಶುಪಾಲ ನಾಗರಾಜು ಕೆ. ಸಿ, ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಗಣ್ಯರು ನಾವು ಹೇಗೆ ಪರಿಸರ ಕಾಪಾಡಿಕೊಳ್ಳಬೇಕು ಎಂಬ ಬಗ್ಗೆ ಮಾತನಾಡಿ ‘ಕಾಡು ಬೆಳೆಸಿ ನಾಡು ಉಳಿಸಿ’, ‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಎಂಬ ಸಂದೇಶ ಸಾರಿದರು.

ಅರಣ್ಯ ಇಲಾಖೆ, ಗ್ರಾಮ ಪಂಚಾಯ್ತಿ ಮತ್ತು ಸರ್ಕಾರಿ ಪ್ರೌಢಶಾಲೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾದಾಮಿ, ಹಲಸು, ಬೀಟೆ ಮತ್ತು ಅರಳಿ ಸಸಿ ಸೇರಿದಂತೆ 200 ಕ್ಕೂ ಅಧಿಕ ಗಿಡಗಳನ್ನು ವಿತರಿಸಲಾಯಿತು. ಗಣ್ಯರ ಸಮ್ಮುಖದಲ್ಲಿ ಸುಮಾರು 200 ಕ್ಕೂ ಅಧಿಕ ಗಿಡಗಳನ್ನು ನಾಟಿ ಮಾಡಲಾಯಿತು. ಮನೆಗೊಂದರಂತೆ ಗಿಡಗಳನ್ನು ನೆಟ್ಟು ಸಂರಕ್ಷಣೆ ಮಾಡಬೇಕು, ಪ್ರಾಣಿ ಪಕ್ಷಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂಬ ಸಲಹೆ ನೀಡಲಾಯಿತು.