ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕಿನ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಂಗವಾಗಿ ಮಲೇರಿಯಾ, ಡೆಂಗ್ಯೂ ನಿಯಂತ್ರಣದ ಬಗ್ಗೆ ಮಾಹಿತಿ ಕಾರ್ಯಕ್ರಮ ಹಿರ್ಗಾನದ ಮೂಜೂರು ಅಂಗನವಾಡಿ ಕೇಂದ್ರದಲ್ಲಿ ಜೂನ್ 18 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಮಾ ಮಲೇರಿಯಾ, ಡೆಂಗ್ಯೂ ಕಾಯಿಲೆಗಳ ಬಗ್ಗೆ ಮಾತನಾಡಿ, ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಆರೋಗ್ಯ ಕಾರ್ಯಕರ್ತೆ ಪ್ರಜ್ಞಾ, ಸೊಳ್ಳೆಗಳು ಉತ್ಪತ್ತಿಯಾಗುವ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸರಿತಾ, ಒಕ್ಕೂಟದ ಅಧ್ಯಕ್ಷರುಗಳು, ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು, ಎಂದು ಯೋಜನಾಧಿಕಾರಿ ಕೃಷ್ಣ. ಟಿ ಮಾಹಿತಿ ನೀಡಿದ್ದಾರೆ.
ಮಲೇರಿಯಾ, ಡೆಂಗ್ಯೂ ಸೊಳ್ಳೆ ನಿಯಂತ್ರಣದ ಬಗ್ಗೆ ಮಾಹಿತಿ
