Communnity DevelopmentNews

ತುಮಕೂರಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಾಗೂ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಎಸ್.ಆರ್.ಎಸ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಾಗೂ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ದಿನಾಂಕ : 04.07.2017ರಂದು ಎಸ್.ಆರ್.ಎಸ್ ಕಾಲೇಜು ಸಭಾಂಗಣದಲ್ಲಿ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಶ್ರೀ ಬಾಬಾ ಸಾಹೇಬ್ ಜನರಾಳ್ಕರ್, ನ್ಯಾಯಧೀಶರು/ಕಾರ್ಯದರ್ಶಿಗಳು, ಕಾನೂನು ಸೇವಾಪ್ರಾಧಿಕಾರ ತುಮಕೂರು, ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಕಾನೂನು ಮತ್ತು ದುಶ್ಚಟ ನಿಕಟ ಸಂಬಂಧವಿದೆ, ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣದ ಬಗ್ಗೆ ದೊಡ್ಡ ಕನಸನ್ನು ಕಟ್ಟಿಕೊಂಡು ಉತ್ತಮ ಗುರಿ ಸಾಧಿಸುವಂತೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿರುವಂತೆ ತಿಳಿಸಿದರು.

ಸಮಾಜ ಸೇವಕರಾದ ಶ್ರೀ ಡಮರುಗ ಉಮೇಶ್‍ರವರು ವಿದ್ಯಾರ್ಥಿಗಳು ಶಿಕ್ಷಕರು ನೀಡುವ ವಿಷಯಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ದುಶ್ಚಟಗಳ ವಿರುದ್ದ, ಜಾಗೃತರಾಗಬೇಕು, ತಾವುಗಳು ಬದಲಾಗಿ ತಮ್ಮ ಕುಟುಂಬ ಹಾಗೂ ಸಮಾಜದ ಜನರನ್ನು ನಿರಂತರ ಪ್ರಯತ್ನದ ಮುಖಾಂತರ ದುಶ್ಚಟದಿಂದ ದೂರವಿರುವಂತೆ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್.ಆರ್.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ಹಾಲನೂರು ಎಸ್.ಲೇಪಾಕ್ಷಿರವರು ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ ತಂದೆ-ತಾಯಿಗಳ ಕನಸಿಗೆ ಬಿಸಿ-ನೀರು ಎರಚದೆ ಅವರ ಕನಸುಗಳನ್ನು ನನಸಾಗುವಂತೆ ಉತ್ತಮ ಭವಿಷ್ಯವನ್ನು ವಿದ್ಯಾರ್ಥಿಗಳಾಗಿ ತಮ್ಮ ಜವಬ್ದಾರಿಯನ್ನು ನಿಬಾಯಿಸಬೇಕೆಂದು ತಿಳಿಸಿದರು.

ಪ್ರಾಸ್ತವಿಕವಾಗಿ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ, ಯೋಜನಾಧಿಕಾರಿಯಾದ ಶ್ರೀ ಚೆನ್ನಕೇಶವರವರು ಗಣ್ಯರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಡಾ. ಸಂಜಯ್ ನಾಯ್ಕರವರು, ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮದ ಬಗ್ಗೆ ತಿಳಿಸಿದರು.

ವಲಯದ ಮೇಲ್ವಿಚಾರಕರಾದ ಶ್ರೀ ಪ್ರಕಾಶ್ ಎಲ್.ಟಿ ರವರು ನಿರೂಪಿಸಿದರು, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ, ಶ್ರೀಮತಿ ಶಶಿಕಲಾ, ಸೇವಾಪ್ರತಿನಿಧಿ ಶ್ರೀಮತಿ ಶೋಭ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *