ದಿನಾಂಕ: 12.10.2017 ರಂದು ಕೂಡ್ಲಿಗಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಕೂಡ್ಲಿಗಿ ತಾಲೂಕು ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ಕಾರ್ಯಕ್ರಮವನ್ನು ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಹೈದರಾಬಾದ್ ಪ್ರಾದೇಶಿಕ ಕಛೇರಿ ಪ್ರಾದೇಶಿಕ ನಿರ್ದೇಶಕರಾದ ಪಿ ಗಂಗಾಧರ್ ರೈ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ
“ ಪರಮ ಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಅನುದಾನಿತ ಕಾರ್ಯಕ್ರಮಗಳಲ್ಲಿ ಒಂದಾದ ಸುಜ್ಞಾನ ನಿಧಿ ಶಿಷ್ಯವೇತನ ತಾಂತ್ರಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವುದರ ಮೂಲಕ ಇನ್ನು ಹೆಚ್ಚಿನ ಮಟ್ಟದಲ್ಲಿ ಅಂಕಗಳನ್ನು ಗಳಿಸಿ ದೇಶದ ಉತ್ತಮ ಪ್ರಜೆಗಳಾಗುವ ನಿಟ್ಟಿನಲ್ಲಿ ಕರ್ನಾಟಕದ ಎಲ್ಲಾ ಯೋಜನಾ ಕಛೇರಿಗಳಲ್ಲಿ ಬರುವ ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ನೀಡುತ್ತಾ ಬಂದಿರುವುದು ಒಂದು ಹೆಮ್ಮೆಯ ವಿಚಾರ. ಇದರ ಜೊತೆಯಲ್ಲಿ ಜ್ಞಾನದೀಪ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡುತ್ತಿದ್ದು, ಶಿಕ್ಷಕರ ಕೊರತೆಯನ್ನು ನೀಗಿಸಿ, ಹೆಚ್ಚಿನ ಸಂಖ್ಯೆಯ ವಿದ್ಯಾಥಿಗಳಿಗೆ ಅನುಕೂಲವಾಗುವಂತೆ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸದ್ಬಳಕೆ ಮಾಡಿಕೊಳ್ಳುವಂತೆ ಎಲ್ಲಾ ಪೋಷಕ ವಿದ್ಯಾರ್ಥಿಗಳಿಗೆ ತಿಳಿಸಿದರು. ಸದ್ರಿ ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಸುನಂದಾ, ಜಿಲ್ಲಾ ನಿರ್ದೇಶಕರಾದ ಶ್ರೀ.ವಿನಯ್ ಕುಮಾರ್, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಉಪಾದ್ಯಕ್ಷರಾದ ಶ್ರೀ ಕಾವಲಿ ಶಿವಪ್ಪನಾಯಕ, ತಾಲೂಕು ಯೋಜನಾಧಿಕಾರಿಗಳಾದ ಕೆ ಸಂತೋಷ್ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.
ನಂತರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ಸುನಂದಾರವರು ಮಾತನಾಡುತ್ತಾ “ಪ್ರತೀ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಎಂದರೆ ಧರ್ಮಸ್ಥಳ ಒಂದೇ, “ಮಾನವ ಸೇವೆಯೇ ಮಾಧವನ ಸೇವೆ”. ಸ್ವಯಂ ಶಿಸ್ತಿಗೆ ಹೆಸರಾದ ಸಂಸ್ಥೆ- ಈ ಸಂಸ್ಥೆ ಹಿಂದುಳಿದ ಪ್ರದೇಶಗಳಿಗೆ ವರದಾನವಾಗಿದೆ ಎಂದು ತಿಳಿಸಿದರು. ನಂತರ ಕೂಡ್ಲಿಗಿ ತಾಲೂಕಿನ ಜರ್ಮಲಿ ಗ್ರಾಮದಲ್ಲಿ ಒಟ್ಟು 10 ಸ್ವಸಹಾಯ ಸಂಘಗಳನ್ನು ಮಾನ್ಯ ಪ್ರಾದೇಶಿಕ ನಿರ್ದೇಶಕರು, ಜಿಲ್ಲಾ ನಿರ್ದೇಶಕರು, ತಾಲೂಕು ಯೋಜನಾಧಿಕಾರಿಗಳು ಉದ್ಘಾಟಿಸಿ ಸದಸ್ಯರಿಗೆ ನಿರ್ಣಯ ಪುಸ್ತಕಗಳನ್ನು ವಿತರಣೆ ಮಾಡಿದರು. ಸದ್ರಿ ಕಾರ್ಯಕ್ರಮದಲ್ಲಿ ಕೂಡ್ಲಿಗಿ ವಲಯದ ಮೇಲ್ವಿಚಾರಕರಾದ ಮಹಾಂತೇಶ್ ಎಮ್, ಸೇವಾಪ್ರತಿನಿಧಿಗಳಾದ ಕುಮಾರಸ್ವಾಮಿ, ಮಾರಣ್ಣ, ಮಹಾಂತೇಶ ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
3 thoughts on “ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ ಮತ್ತು ಸ್ವಸಹಾಯ ಸಂಘ ಉದ್ಘಾಟನಾ ಕಾರ್ಯಕ್ರಮ”
The scholarship is help to continue the education
Sir to continue the education the scholarship help. And my family is basically poor
Your scholership helps for mẹ study perpose