“ಗುಂಜನೂರು ಆಂಜನೇಯ ದೇವಸ್ಥಾನ ಜೀರ್ಣೋದ್ಧಾರ”
ಸೊರಬ ತಾಲೂಕು : “ಮನಸ್ಸಿನಿಂದ ಎಲ್ಲರೂ ಸನ್ಯಾಸಿಗಳಾಗಬೇಕು”, ದುಷ್ಚಟಗಳಿಗೆ ಹಾಕುವ ದುಡ್ಡಿನ ಬದಲು ಧರ್ಮಕಾರ್ಯಗಳಿಗೆ ಸಂಪಾದನೆಯ ಭಾಗವನ್ನು ವಿನಿಯೋಗಿಸಬೇಕು. ಪ್ರತಿನಿತ್ಯ ಸ್ನಾನ ಮಾಡುವುದರ ಮೂಲಕ ದೇಹದ ಸ್ವಚ್ಛತೆ, ಧ್ಯಾನ, ಪೂಜೆ ಹಾಗೂ ಪ್ರತಿನಿತ್ಯ ಹತ್ತಿರದ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಮನಸ್ಸಿನ ಸ್ವಚ್ಛತೆಯನ್ನು ಕಾಪಾಡಿಕೊಂಡು ಮನಸ್ಸಿನಿಂದ ಎಲ್ಲರೂ ಸನ್ಯಾಸಿಗಳಾಗಬೇಕು.” ಎಂದು ಜಡೆ ಹಿರೇಮಠದ ಪೂಜ್ಯ ಶ್ರೀ ಷ.ಬ್ರ. ಘನಬಸವೇಶ್ವರ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು. ಗುಂಜನೂರು ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 50000/- ಧನ ಸಹಾಯ ವಿತರಣೆ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಮಾತನಾಡುತ್ತಿದ್ದರು. “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಮಹಿಳೆಯರಲ್ಲಿ ಆರ್ಥಿಕ ಸ್ವಾವಲಂಬನೆ, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ನೆರವು, ಮದ್ಯವರ್ಜನ ಶಿಬಿರಗಳನ್ನು ಮಾಡುವ ಮೂಲಕ ದುಶ್ಚಟ ನಿರ್ಮೂಲನೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಅತ್ಯಂತ ಶ್ಲಾಘನೀಯವಾದುದು” ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೊರಬ ತಾಲೂಕಿನ ಯೋಜನಾಧಿಕಾರಿ ಶ್ರೀ ರಮೇಶ್ ಪಿ.ಕೆ ರವರು ರೂ. 50000/- ಡಿ.ಡಿ ಯನ್ನು ದೇವಸ್ಥಾನ ಸಮಿತಿಯವರಿಗೆ ಹಸ್ತಾಂತರಿಸಿದರು. ಹೆಚ್ಚೆ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಪುರುಷೋತ್ತಮ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀ ಪುರುಷೋತ್ತಮ, ದೇವಸ್ಥಾನ ಜೀಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀ ಸುರೇಂದ್ರ, ಗ್ರಾ.ಪಂ ಸದಸ್ಯ ಶ್ರೀ ಚಂದ್ರಪ್ಪ, ವಲಯ ಮೇಲ್ವಿಚಾರಕಿ ಶ್ರೀಮತಿ ಸಾವಿತ್ರಿ ಸೇವಾಪ್ರತಿನಿಧಿ ಶ್ರೀ ಯೋಗೀಶ್, ಮೊದಲಾದವರು ಉಪಸ್ಥಿತರಿದ್ದರು.