Community HealthNews

ಅಂತರಾಷ್ಟ್ರೀಯ ಮಾದಕ ವಸ್ತು ವಿರೋದಿ ದಿನಾಚರಣೆ

ಹುಲ್ಲಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಯುವ ಸಮೂಹ ದುಶ್ಚಟಗಳಿಗೆ ದಾಸರಾಗದೆ ಮದ್ಯಪಾನ ಮುಕ್ತ ಮಾದಕ ವಸ್ತುಗಳ ಸೇವನೆಯಿಂದ ಮಾನವನ ಆರೋಗ್ಯ ಸಂಪೂರ್ಣ ಹಾಳಾಗುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ಮೇಲೆ ಅನೇಕ ರೀತಿಯ ದುಷ್ಪರಿಣಾಮ ಆಗುತ್ತಿರುವುದನ್ನು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ದುಶ್ಚಟಕ್ಕೆ ದಾಸರಾಗದೆ ಉತ್ತಮ ಬದುಕನ್ನು ಕಟ್ಟಿಕೊಳ್ಳ ಬೇಕೆಂದು ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಜಿಲ್ಲಾ ನಿರ್ದೇಶಕರಾದ ಶ್ರೀಯುತ ವಿಜಯಕುಮಾರ್ ನಾಗನಾಳ ತಿಳಿಸಿದರು. ಹುಲ್ಲಹಳ್ಳಿ ಸ.ಪ್ರ.ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ.ಕ್ಷೇ.ಧ.ಗ್ರಾ.ಯೋಜನೆ (ರಿ.) ವತಿಯಿಂದ ಜರುಗಿದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋದಿ ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ|| ಡಿ. ವಿರೇಂದ್ರ ಹೆಗ್ಗಡೆಯವರು ಸಮಾಜದ ಅಭಿವೃದ್ಧಿಗಾಗಿ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ಶಾಲಾ ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದು ಜನ ಮೆಚ್ಚುವ ಕೆಲಸವಾಗಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕೆಂದು ತಿಳಿಸಿದರು.
ಪ್ರಾಂಶುಪಾಲರಾದ ಶ್ರೀಮತಿ ರಾಜಮ್ಮ ಅವರು ಮಾತನಾಡಿ ಇಂದಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುವುದಲ್ಲದೇ ತಮ್ಮ ಕುಟುಂಬದ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಮಾದಕ ವಸ್ತುಗಳ ಸೇವನೆಗೆ ದಾಸರಾದವರು ಮಾದಕ ಸೇವನೆ ಬಿಟ್ಟು ಸಮಾಜದ ಮುಖ್ಯ ವಾಹಿನಿಗೆ ಬಂದು ಗೌರವಯುತ ಬದುಕನ್ನು ಕಟ್ಟಿಕೊಳ್ಳ ಬೇಕು. ಯಾವುದೇ ಕಾರಣಕ್ಕೂ ಯುವ ಸಮೂಹ ದುಶ್ಚಟಗಳಿಗೆ ದಾಸರಾಗಬಾರದೆಂಬ ಕಿವಿ ಮಾತು ಹೇಳಿದರು.
ಶಿಬಿರಾಧಿಕಾರಿಯಾದ ಶ್ರೀಯುತ ನಂದಕುಮಾರ್ ಇವರು ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸವನ್ನು ನೀಡಿದರು. ತದನಂತರ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಜಾಥಾ ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀ ವರದರಾಜು, ಶ್ರೀ ಎಸ್.ಎ.ಎಲ್. ಮೂರ್ತಿ , ಪ್ರಾಧ್ಯಾಪಕರಾದ ಡಾ|| ಜಯಾ, ಉಪನ್ಯಾಸಕರಾದ ಡಾ|| ರಮೇಶ್, ಡಾ|| ಮಲ್ಲೇಶ್, ಯೋಜನಾಧಿಕಾರಿಗಳಾದ ಶ್ರೀ ಅಭಯ್‍ರಾಜ್ ಬಿ. ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕರಾದ ಶ್ರೀ ರಮೇಶ್, ಸ್ವಾಗತಿಸಿದರು ಮೇಲ್ವಿಚಾರಕರಾದ ವೀಣಾರವರು ವಂದಿಸಿದ್ದು, ಪ್ರಾಧ್ಯಾಪಕರಾದ ಡಾ|| ಪ್ರಸಾದ್ ಇವರು ನಿರೂಪಿಸಿದರು.

Leave a Reply

Your email address will not be published. Required fields are marked *