NewsTraining

ಸಂಜೀವಿನಿ ಯೋಜನೆ ಮೂಲಕ ಗ್ರಾಮೀಣ ಮಹಿಳೆಯರ ಸಾಮಥ್ರ್ಯ ಬಲವರ್ಧನೆ ಸಾಧ್ಯ: ಆನಂದ ಕುಮಾರ್

ಸಂಜೀವಿನಿ ಯೋಜನೆ ಕೇಂದ್ರ ಸರಕಾರದ ಒಂದು ಯೋಜನೆ ಆಗಿದ್ದು, ಮಹಿಳಾ ಸ್ವ ಸಹಾಯ ಗುಂಪುಗಳನ್ನು ಆಧಾರವಾಗಿ ಇಟ್ಟುಕೊಂಡು ಅನುಷ್ಠಾನಗೊಳ್ಳುತ್ತಿರುವ ಯೋಜನೆ ಆಗಿದೆ. ಸ್ಥಳೀಯ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವುದರ ಮೂಲಕ ಬಡತನ ತೀವ್ರತೆಯನ್ನು ಕಡಿಮೆಗೊಳಿಸುವುದರ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸವುದಾಗಿದೆ. ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಮುಖ್ಯ ಪುಸ್ತಕ ಬರಹಗಾರರು ಸಮುದಾಯ ಆಧಾರಿತ ಸಂಸ್ಥೆಗಳನ್ನು ಬಲವರ್ಧನೆಗೊಳಿಸುವುದರ ಮುಖಾಂತರ ಗ್ರಾಮೀಣ ಮಹಿಳೆಯರ ಸಾಮಥ್ರ್ಯ ಬಲವರ್ಧನೆ ಮಾಡುವ ಜವಾಬ್ದಾರಿ ತಮ್ಮ ಮೇಲಿದೆ. ಆದುದರಿಂದ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಸಂಜೀವಿನಿ ಯೋಜನೆ ಮುನ್ನೆಡೆಸಬೇಕಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಆನಂದ ಕುಮಾರ್ ನುಡಿದರು.
ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಅಡಿಯಲ್ಲಿ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ 5 ದಿನಗಳ ಸಾಮಥ್ರ್ಯ ಬಲವರ್ಧನ ತರಬೇತಿಯನ್ನು ಬೆಳ್ತಂಗಡಿ ಲಾೈಲದ ತರಬೇತಿ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್- ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ನಡೆಸಲಾಯಿತು. ಸಮಾರಂಭದಲ್ಲಿ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ನಿರ್ದೇಶಕ ಕೆ. ಬೂದಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಪ್ರಾಂಶುಪಾಲ ಚಂದ್ರಶೇಖರ್, ಡಿ.ಪಿ.ಎಂ. ಹರಿಪ್ರಸಾದ್, ತಾಲೂಕು ಪಂಚಾಯತ್ ತರಬೇತುದಾರ ಜಯಾನಂದ್ ಉಪಸ್ಥಿತರಿದ್ದರು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಲಕ್ಷ್ಮಣ ಗೌಡ, ಮಂಜುನಾಥರವರು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *