DharmasthalaNews

ವಿಪತ್ತು ನಿರ್ವಹಣೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಂಡ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ ಮತ್ತು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಸ್ವಯಂ ಸೇವಕರು ಧೈರ್ಯ, ತ್ಯಾಗ, ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವ ಹೊಂದಿದ್ದು, ಸ್ವಯಂ ಸ್ಪೂರ್ತಿಯಿಂದ ರಕ್ಷಣಾ ಕಾರ್ಯಕ್ಕೆ ಸದಾ ಬದ್ಧರಾಗಿರಬೇಕು ಹಾಗೂ ಸಿದ್ಧರಾಗಿರಬೇಕು, ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ತಕ್ಷಣ ಸ್ಪಂದಿಸಬೇಕು. ಮೊದಲು ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡು ಬಳಿಕ ಇತರರ ರಕ್ಷಣೆಗೆ ನೆರವಾಗಬೇಕು. ಪ್ರಜ್ಞಾವಂತರಾಗಿ ತಾವೂ ಬದುಕಿ, ಇತರರೂ ಬದುಕಲು ನೆರವಾಗುವುದು ಮಾನವ ಧರ್ಮವಾಗಿದೆ. ಆಪತ್ತು ನಿರ್ವಹಣೆ ಮಾಡಲು ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ವೈಜ್ಞಾನಿಕವಾಗಿ ಶಿಸ್ತು ಬದ್ಧವಾಗಿ ವಿಪತ್ತು ನಿರ್ವಹಣೆ ಸ್ವಯಂ ಸೇವಕರಿಗೆ ಮಾಹಿತಿ, ಮಾರ್ಗದರ್ಶನ ಹಾಗೂ ತರಬೇತಿಯ ಅಗತ್ಯವಾಗಿದೆ. ರಕ್ಷಣಾ ಪರಿಕರಗಳ ಸಮರ್ಪಕ ಬಳಕೆ ಬಗ್ಗೆಯೂ ಅವರಿಗೆ ಮಾಹಿತಿ ನೀಡಲಾಗುವುದು. ಸ್ವಯಂ ಸೇವಕರು ತಮ್ಮ ಮನೆಯವರಿಗೂ, ನೆರೆಕರೆಯವರಿಗೂ ವಿಪತ್ತು ನಿರ್ವಹಣೆ ಬಗ್ಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಮಾತನಾಡಿ, ಸೂಕ್ತ ತರಬೇತಿಯಿಂದ ಸ್ವಯಂ ಸೇವಕರು ಉತ್ತಮ ರೀತಿಯ ಸೇವೆ ನೀಡಲು ಅನುಕೂಲವಾಗುತ್ತದೆ, ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ಧರ್ಮಸ್ಥಳದ ಕೊಡುಗೆ ಮತ್ತು ಸಹಕಾರವನ್ನು ಧನ್ಯತೆಯಿಂದ ಅವರು ಸ್ಮರಿಸುತ್ತಾ ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ, ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ಜನರ ಪ್ರಾಣ ಹಾಗೂ ಸಂಪತ್ತಿನ ರಕ್ಷಣೆಗೆ ಕಟಿಬದ್ಧರಾಗಿರಬೇಕು ಎಂದು ಸಲಹೆ ನೀಡಿದರು.

ಡಿ. ಸುರೇಂದ್ರ ಕುಮಾರ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಗೋಪಾಲ್‍ಲಾಲ್ ಮೀನಾ, ಮಂಗಳೂರು ಘಟಕದ ಅಧಿಕಾರಿ ವಿಜಯಕುಮಾರ್ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್ ಎಚ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ 55 ಸೂಕ್ಷ್ಮ ಪ್ರದೇಶಗಳಲ್ಲಿ ಸ್ವಯಂ ಸೇವಕರ ತಂಡಗಳನ್ನು ರಚಿಸಿ ತರಬೇತಿ ನೀಡಲಾಗುವುದು.

ಪ್ರಥಮವಾಗಿ ಬೆಳ್ತಂಗಡಿ ತಾಲೂಕಿನ 200 ಸ್ವಯಂ ಸೇವಕರ ತಂಡ ಸೋಮವಾರ ಧರ್ಮಸ್ಥಳದಲ್ಲಿ ಉದ್ಘಾಟನೆ ಮಾಡಲಾಯಿತು.

3 thoughts on “ವಿಪತ್ತು ನಿರ್ವಹಣೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಂಡ

Leave a Reply

Your email address will not be published. Required fields are marked *