ಜ.18: ಹಿಂದಿನ ಕಾಲದಲ್ಲಿ ಹಳ್ಳಿಯಿಂದ ಪಟ್ಟಣಕ್ಕೆ ಬರುತ್ತಿದ್ದರು; ಆದರೆ ಈಗ ಪಟ್ಟಣದಿಂದ ಹಳ್ಳಿಗೆ ಹೋಗೋಣ ಎನ್ನುವ ಮಾತು ಕೇಳಿಬರುತ್ತಿದೆ. ರೈತ ದೇಶದ ಬೆನ್ನೆಲುಬಾಗಿ ನಿಂತಿರುವುದರಿಂದ ನಾವೆಲ್ಲರೂ ಇಂದು ಖುಷಿಯಾಗಿದ್ದೇವೆ. ಪ್ರಸ್ತುತ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗಿದ್ದು, ಗ್ರಾಮಾಭಿವೃದ್ಧಿ ಯೋಜನೆಯು ಸ್ವಉದ್ಯೋಗಕ್ಕೆ ಪೂರಕ ತರಬೇತಿಗಳನ್ನು ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಉಜಿರೆಯ ವಸತಿ ಕಾಲೇಜಿನ ಪ್ರಾಂಶುಪಾಲ ಡಾ| ಟಿ. ಕೃಷ್ಣಮೂರ್ತಿ ಮಾತನಾಡಿದರು.
ಅವರು ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಎರಡನೇ ಬ್ಯಾಚ್ನ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿಯ ಉದ್ಘಾಟಕರಾಗಿ ಮಾತನಾಡಿದರು.
ಕೌಶಲ್ಯಾಭಿವೃದ್ಧಿ ಯೋಜನೆಯಡಿಯಲ್ಲಿ ತರಬೇತಿಯು ಉಚಿತವಾಗಿ ನಡೆಯುತ್ತಿದ್ದು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಜಿಲ್ಲೆಯ ಜಂಟಿ ಬಾಧ್ಯತಾ ಸಂಘ/ಸ್ವ ಸಹಾಯ ಸಂಘ/ಪ್ರಗತಿಬಂಧು ಸಂಘದ ಒಟ್ಟು 59 ಮಂದಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಯೋಜನಾಧಿಕಾರಿ ಶ್ರೀಮತಿ ಜಯಂತಿ, ತರಬೇತಿ ಸಂಯೋಜಕರಾದ ಶ್ರೀ ಬಾಲಕೃಷ್ಣ, ಶ್ರೀ ರಾಜೇಶ್ ಉಪಸ್ಥಿತರಿದ್ದರು.