Community HealthCommunnity DevelopmentNews

298ನೇ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಗ್ರಾಮಭಿವೃದ್ಧಿಯಲ್ಲಿ ಧರ್ಮಸ್ಥಳ ಯೋಜನೆಯ ಪಾತ್ರ ದೊಡ್ಡದ್ದು ಗ್ರಾಮೀಣ ಪ್ರದೇಶದ ಮಹಿಳೆಯರು ಸಂಘ ರಚಿಸಿಕೊಂಡು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು-298ನೇ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ – ಶಾಸಕ ಜಿ.ಟಿ ದೇವೇಗೌಡ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಶಾಸಕ ಜಿ.ಟಿ ದೇವೇಗೌಡರು ಹೇಳಿದರು. ಮೈಸೂರು ತಾಲೂಕಿನ ಕೂರ್ಗಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಜಿಲ್ಲಾ ಪಂಚಾಯತಿ ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಆಶ್ರಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಹಿಳೆಯರು ಧರ್ಮಸ್ಥಳದ ಸಂಘಗಳನ್ನು ರಚಿಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದುವವರ ಜೊತೆಯಲ್ಲಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಂತಾಗಬೇಕೆಂದರು. ತಮ್ಮ ಅಧಿಕಾರಿಯವರಲ್ಲಿ ಜನರ ಋಣ ತೀರಿಸಲು ಸಾಕಷ್ಟು ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇನೆ. ಈ ಶುದ್ಧ ಕುಡಿಯುವ ನೀರಿನ ಘಟಕದ ನಿರ್ಮಾಣಕ್ಕೆ ಶಾಸಕ ಅನುದಾನದಲ್ಲಿ ರೂ 4.5 ಲಕ್ಷ ಅನುದಾನ ನೀಡಿದ್ದು ಧರ್ಮಸ್ಥಳ ಸಂಸ್ಥೆಯವರು ರೂ 5.5 ಲಕ್ಷ ಅನುದಾನ ವಿನಿಯೋಗ ಮಾಡುವುದರೊಂದಿಗೆ ಉತ್ತಮವಾದ ಕೆಲಸ ಮಾಡಿದ್ದು ಅದೇ ರೀತಿ ಸಾಮಾಜಿಕವಾಗಿ ಮಾಡುವ ಎಲ್ಲಾ ಕಾರ್ಯಕ್ರಮಗಳಿಗೂ ಸಹಕಾರ ನೀಡುವುದಾಗಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಎ. ಶ್ರೀಹರಿ ಮತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೇ ಸಾಮಾಜಿಕವಾಗಿ ಸ್ಪಂದಿಸಲು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಳ್ಳಿಗಳಲ್ಲಿನ ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಾ ಬಂದಿದ್ದಾರೆ.

ನೀರು ಪ್ಲೋರೈಡ್, ನೈಟ್ರೇಟ್ ಮತ್ತು ಗಡಸುತನದಿಂದ ಕಲುಷಿತವಾಗಿದ್ದು, ತೀರಾ ಕುಡಿಯುವ ನೀರಿನ ಸಮಸ್ಯೆಗಳು ಇರುವ ಗ್ರಾಮಗಳಲ್ಲಿ ನೀರು ಶುದ್ಧಿಕರಣ ಘಟಕಗಳನ್ನು ಸ್ಥಾಪಿಸಿ ಕೇವಲ 10 ಪೈಸೆಯಲ್ಲಿ 1 ಲೀಟರ್ ನೀರನ್ನು ಗ್ರಾಹಕರಿಗೆ ಒದಗಿಸುವ ಕಾರ್ಯಕ್ರಮವನ್ನು ಅನುಷ್ಠಾನಿಸಲಾಗುತ್ತಿದೆ ಎಂದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜಮ್ಮ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ಜಿಲ್ಲಾ ನಿರ್ದೇಶಕರರಾದ ವಿ. ವಿಜಯ್ ಕುಮಾರ್ ನಾಗನಾಳ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಿಕಾ ಸುರೇಶ್, ತಾಲೂಕು ಪಂಚಾಯತ್ ಸದಸ್ಯರಾದ ರಾಣಿ ಸತೀಶ್, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹದೇವ, ಯೋಜನಾಧಿಕಾರಿ ಆನಂದ್, ಮೇಲ್ವಿಚಾರಕರಾದ ಜಗದೀಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *