ಅಮೇರಿಕಾದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ 13 ಮಂದಿ ವಿದ್ಯಾರ್ಥಿಗಳು ಜನವರಿ 06 ರಂದು ಧರ್ಮಸ್ಥಳಕ್ಕೆ ಆಗಮಿಸಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಛೇರಿಗೆ ಭೇಟಿ ನೀಡಿದರು. ಈ ಸಂಧರ್ಭ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ|ಎಲ್.ಎಚ್.ಮಂಜುನಾಥ್ ರವರು ಗ್ರಾಮಾಭಿವೃದ್ಧಿ ಯೋಜನೆಯ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ನಂತರ ಶ್ರೀ ಕ್ಷೇತ್ರ
ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾರ್ಗದರ್ಶನ ಪಡೆದರು. ಬಳಿಕ ಕ್ಷೇತ್ರದಲ್ಲಿರುವ ವಿವಿಧ ಪ್ರೇಕ್ಷಣೀಯ
ಸ್ಥಳಗಳನ್ನು ವೀಕ್ಷಿಸಿ ಎಲ್ಲಾ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಶ್ರೀಮತಿ ಮಮತಾ ಹರೀಶ್ ರಾವ, ಪೆನ್ಸಿಲ್ವೇನಿಯ ಯುನಿವರ್ಸಿಟಿಯ ಪ್ರೊ.ಫೆಮಿನಾ ಆ್ಯಡಿ, ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ವಿನೋದ್ ದೀಕ್ಷಿತ್, ಮಾನವ ಸಂಪನ್ಮೂಲ ವಿಭಾಗದ ಪ್ರಬಂಧಕರಾದ ತೋಷತ್ ಕುಮಾರ್, ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಉಪನ್ಯಾಸಕರಾದ ರಾಜೇಶ್ ಉಪಸ್ಥಿತರಿದ್ದರು.