ಕಿತ್ತೂರು: ಇಲ್ಲಿನ ಹಿರೇನಂದಿಹಳ್ಳಿ ಮಠದ ಲಕ್ಷ್ಮಿದೇವಿ ಕೆರೆಯು ‘ನಮ್ಮ ಊರು ನಮ್ಮ ಕೆರೆ’ ಹಾಗೂ ಸರ್ಕಾರದ ‘ಕೆರೆ ಸಂಜೀವಿನಿ’ ಯೋಜನೆಯಡಿ ಅಬಿವೃದ್ಧಿಗೊಂಡಿದ್ದು ಪೂಜ್ಯ.ಡಾ.ಡಿ ವೀರೇಂದ್ರ ಹೆಗ್ಗಡೆಯವರು ಕೆರೆಯನ್ನು ಇಲ್ಲಿನ ಜನರಿಗೆ ಹಸ್ತಾಂತರಿಸಿದರು. ಈ ಕೆರೆಯು 16.18ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಂಡಿದೆ.
ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೆರೆ ಸಂಜೀವಿನಿ ಕಾರ್ಯಕ್ರಮ ಬೆಳಗಾವಿ ಜಿಲ್ಲೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೆರೆ ಅಭಿವೃದ್ಧಿಯಲ್ಲಿ ಶ್ರಮಿಸಿದ್ದು ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಲಭ್ಯವಾಗಿದೆ. ಕಾರ್ಯಕ್ರಮದಲ್ಲಿ ಹಿರೇನಂದಿಹಳ್ಳಿ ಮಠದ ನಾಗಭೂಷಣ ಶಿವಯೋಗೀಶ್ವರ ಸ್ವಾಮೀಜಿ ಹಾಗೂ ಲಕ್ಷ್ಮಿದೇವಿ ಕೆರೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಗೌಡ ಪಾಟೀಲ್ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು