ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬೃಹತ್ ವನಸಂವರ್ಧನಾ ಅಭಿಯಾನಕ್ಕೆ ಚಾಲನೆ
Posted onಉಡುಪಿ ತಾಲೂಕಿನ ಮಾರ್ಪಳ್ಳಿ ಗ್ರಾಮದಲ್ಲಿ ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದಲ್ಲಿ ದೇವರ ಕಾಡಿಗೆ ನಾಟಿ ಮಾಡುವುದರ ಮುಖೇನ ರಾಜ್ಯದ ಸನ್ಮಾನ್ಯ ಅರಣ್ಯ ಸಚಿವರಾದ ಶ್ರೀ ಬಿ.ರಮಾನಾಥ ರೈಯವರು ,ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಗ್ರಾಮದಲ್ಲಿ ಸನ್ಮಾನ್ಯ ಕೃಷಿ ಸಚಿವರಾದ ಶ್ರೀ ಕೃಷ್ಣಬೈರೇಗೌಡರವರು ಬೀಜದುಂಡೆ ವಿತರಣೆ ಮತ್ತು ಸಸಿ ನಾಟಿ ಕಾರ್ಯಕ್ರಮವನ್ನು ನೆರವೇರಿ ಕೊಟ್ಟರು.