ವಿಶ್ವ ಪರಿಸರ ದಿನಾಚರಣೆ ಮತ್ತು ಬೀಜದುಂಡೆ ತಯಾರಿ ಕಾರ್ಯಕ್ರಮ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಗುಬ್ಬಿ ತಾಲ್ಲೂಕಿನ ಕಲ್ಲೂರು ಕಾರ್ಯಕ್ಷೇತ್ರದಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನಾಚರಣೆ ಮತ್ತು ಬೀಜದುಂಡೆ ತಯಾರಿ ಕಾರ್ಯಕ್ರಮ ನಡೆಯಿತು. ಸಸಿಗಳನ್ನು ನೆಡುವುದರ ಜೊತೆಗೆ ಸುಮಾರು 1,000 ಬೀಜದುಂಡೆಗಳನ್ನು ತಯಾರಿಸಲಾಯಿತು. ಕೃಷ್ಣರಾಜಪೇಟೆಯ ಸರಕಾರಿ ಮಹಿಳಾ ಕಾಲೇಜು ಮತ್ತು ಪ್ರೌಢಶಾಲಾ ಆವರಣದಲ್ಲೂ ಜೂನ್ 5 ರಂದು ವನಮಹೋತ್ಸವ ಮತ್ತು ವಿಶ್ವ ಪರಿಸರ ದಿನಾಚರಣೆ ನಡೆಯಿತು.